ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಅಪ್ರಾಪ್ತೆಯೊಂದಿಗೆ ದೈಹಿಕ ಸಂಪರ್ಕ: ಬಾಲಕಿ ಗರ್ಭಿಣಿ

ಧಾರವಾಡ: ಅಪ್ರಾಪ್ತಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭಿಣಿಯಾಗುವಂತೆ ಮಾಡಿದ ಯುವಕನೊಬ್ಬನನ್ನು ಇದೀಗ ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ ಜನ್ನತನಗರದ ಅಪ್ರಾಪ್ತಳೊಬ್ಬಳನ್ನು ಪ್ರೀತಿಸುವುದಾಗಿ ನಂಬಿಸಿದ ಅದೇ ನಗರದ ತನ್ವೀರ್ ಯಲಿಗಾರ ಎಂಬಾತ ಆಕೆಯೊಂದಿಗೆ ದೈಹಿಕ ಸಂಪರ್ಕ ಮಾಡಿದ್ದ. ಇದರಿಂದ ಆ ಬಾಲಕಿ ಗರ್ಭಿಣಿಯಾಗಿದ್ದು, ಈ ವಿಷಯ ಗೊತ್ತಾದ ನಂತರ ಬಾಲಕಿ ಮನೆಯವರು ಆ ತನ್ವೀರ್‌ನ ವಿರುದ್ಧ ದೂರು ನೀಡಿದ್ದಾರೆ.

ಇದೀಗ ವಿದ್ಯಾಗಿರಿ ಠಾಣೆ ಪೊಲೀಸರು ಪೊಕ್ಸೊ ಕಾಯ್ದೆಯಡಿ ದೂರು ದಾಖಲಿಸಿಕೊಂಡು ತನ್ವೀರ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Edited By :
Kshetra Samachara

Kshetra Samachara

02/02/2022 06:51 pm

Cinque Terre

45.43 K

Cinque Terre

24

ಸಂಬಂಧಿತ ಸುದ್ದಿ