ಹುಬ್ಬಳ್ಳಿ: ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದವರನ್ನು ಬೆಂಡಿಗೇರಿ ಪೊಲೀಸರು ಪತ್ತೆ ಹಚ್ಚಿ ಸುಮಾರು 6,929 ರೂ. ಮೌಲ್ಯದ 15 ಲೀ. ಮದ್ಯ ವಶಪಡಿಸಿಕೊಂಡಿದ್ದಾರೆ.
ನಗರದ ಸೆಟ್ಲಮೆಂಟ್‌ನಲ್ಲಿ ಅನಧಿಕೃತವಾಗಿ ಮದ್ಯ ಮಾರುತ್ತಿರುವ ಮಾಹಿತಿ ಮೇರೆಗೆ ಬೆಂಡಿಗೇರಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ 90 ಎಂಎಲ್‌ನ 15 ಲೀ. ಮದ್ಯ ಪತ್ತೆಯಾಗಿದೆ. ಠಾಣೆಯ ಇನ್ಸ್ಪೆಕ್ಟರ್ ಶ್ಯಾಮರಾಜ ಸಜ್ಜನ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಆರೋಪಿತರನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬೆಂಡಿಗೇರಿ ಪೊಲೀಸರನ್ನು ಮಹಾನಗರ ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
Kshetra Samachara
04/02/2022 10:37 am