ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಡಾಕ್ಟರ್ ಮನೆಯಲ್ಲಿ ಚಿನ್ನಾಭರಣ, ಹಣ ದೋಚಿದ ಖದೀಮರು

ಹುಬ್ಬಳ್ಳಿ: ವೈದ್ಯರ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ಕಳ್ಳರು, ಹಿಂಬದಿಯ ಬೀಗ ಮುರಿದು ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ಹಣವನ್ನು ಕದ್ದಿರುವ ಘಟನೆ ಹುಬ್ಬಳ್ಳಿ-ಗದಗ ರಸ್ತೆಯ ಚೇತನಾ ಕಾಲೋನಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.

ಡಾ. ಬಸವರಾಜ ದೊಡ್ಡಮನಿ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಡಾ. ಬಸವರಾಜ ಅವರು ಕ್ಲಿನಿಕ್ಗೆ ಹೋದ ವೇಳೆ ಕಳ್ಳರು ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಮನೆಯಲ್ಲಿದ್ದ ಸುಮಾರು 250 ಗ್ರಾಂ ಚಿನ್ನ, 5 ಲಕ್ಷ ರೂ. ಹಣ ಮತ್ತು ಕೆಲ ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಈ ಕುರಿತು ಕೇಶ್ವಾಪೂರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಳ್ಳರಿಗಾಗಿ ಬಲೆ ಬೀಸಿದ್ದಾರೆ.

Edited By : Manjunath H D
Kshetra Samachara

Kshetra Samachara

05/02/2022 01:33 pm

Cinque Terre

27.18 K

Cinque Terre

0

ಸಂಬಂಧಿತ ಸುದ್ದಿ