ಹುಬ್ಬಳ್ಳಿ: ಇಲ್ಲಿನ ಗೋಕುಲ ರೋಡ್ ಜೆಪಿ ನಗರದ ಮದರಸಾ ಎದುರಿನ ಖುಲ್ಲಾ ಜಾಗದಲ್ಲಿ ಇಸ್ಪೀಟ್ ಆಡುತ್ತಿದ್ದ ಅಡ್ಡೆ ಮೇಲೆ ಗೋಕುಲ ರೋಡ್ ಠಾಣೆ ಪೊಲೀಸರು ರಾತ್ರಿ ದಾಳಿ ನಡೆಸಿ 7 ಜನರನ್ನು ಬಂಧಿಸಿದ್ದಾರೆ.
ಆರೋಪಿತರಿಂದ 29,000 ರೂ. ನಗದು, ಎರಡು ಕಾರು, ನಾಲ್ಕು ಬೈಕ್, ನಾಲ್ಕು ಮೊಬೈಲ್‌ಫೋನ್ ವಶಪಡಿಸಿಕೊಂಡಿದ್ದಾರೆ. ಇಸ್ಪೀಟ್ ಅಡ್ಡೆ ಕುರಿತು ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್ ಜೆ.ಎಂ. ಕಾಲಿಮಿರ್ಚಿ ನೇತೃತ್ವದ ತಂಡ ದಾಳಿ ನಡೆಸಿತ್ತು. ಗೋಕುಲ ರೋಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
09/02/2022 08:38 am