ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪತ್ನಿಯಿಂದ ಪತಿಗೆ ಜೀವ ಬೆದರಿಕೆ: ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಪತ್ನಿಯೇ ಪತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದಲ್ಲದೇ ಜೀವ ಬೆದರಿಕೆ ಹಾಕಿರುವ ಬಗ್ಗೆ ನವನಗರದ ಎಪಿಎಂಸಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈರಿದೇವರಕೊಪ್ಪದ ಶಾಂತಿನಿಕೇತನ ಕಾಲೊನಿ ನಿವಾಸಿ ಕಸ್ತೂರೆವ್ವ ಗೋಕಾವಿ ಎಂಬಾಕೆ ತನ್ನ ಪತಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಪತಿ ಬಸವರಾಜ ಗೋಕಾವಿ ಅವರನ್ನು ಮೊದಲು ಮನೆಯಲ್ಲಿ ಕೂಡಿ ಹಾಕಿ ಹೊರಗಡೆಯಿಂದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಮನೆಯ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಮತ್ತು ಅವರಿಗೆ ಲತಾ ಸತೀಶ ಎರಪೆಲ ಮತ್ತು ಸತೀಶ ಎರಪೆಲ ಎಂಬಾತರು ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

15/02/2022 07:31 am

Cinque Terre

16.63 K

Cinque Terre

0

ಸಂಬಂಧಿತ ಸುದ್ದಿ