ಧಾರವಾಡ: ಶಿವಮೊಗ್ಗ ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಬಜರಂಗದಳ, ಹಿಂದೂ ಜಾಗರಣ ವೇದಿಕೆ ಸೇರಿದಂತೆ ಇತರ ಹಿಂದೂಪರ ಸಂಘಟನೆಗಳು ಇಂದು ರಸ್ತೆ ತಡೆದು ಪ್ರತಿಭಟನೆ ನಡೆಸಿದವು.
ಧಾರವಾಡದ ಆಲೂರು ವೆಂಕಟರಾವ್ ವೃತ್ತ, ಕೋರ್ಟ್ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಮುಸ್ಲಿಂ ಸಂಘಟನೆಗಳನ್ನು ಕೂಡಲೇ ನಿಷೇಧಿಸಬೇಕು ಎಂದು ಆಗ್ರಹಿಸಿದರು. ಈ ಪ್ರತಿಭಟನೆಯಲ್ಲಿ ವಿಕಲಚೇತನರೊಬ್ಬರು ಪಾಲ್ಗೊಂಡು ಗಮನಸೆಳೆದರು. ವಿನಾಕಾರಣ ಹಿಂದೂ ಕಾರ್ಯಕರ್ತರನ್ನು ಕೆಣಕುವ ಕೆಲಸ ಆಗುತ್ತಿದೆ. ಇನ್ನುಮುಂದೆ ನಮ್ಮ ಸಂಘಟನೆ ಕಾರ್ಯಕರ್ತರು ಸುಮ್ಮನೇ ಕುಳಿತುಕೊಳ್ಳುವುದಿಲ್ಲ ಎಂದು ಹಿಂದೂ ಜಾಗರಣ ವೇದಿಕೆಯ ಜಯತೀರ್ಥ ಮಳಗಿ ಎಚ್ಚರಿಕೆ ನೀಡಿದ್ದಾರೆ.
ಧಾರವಾಡ ಕೋರ್ಟ್ ವೃತ್ತದಲ್ಲಿ ಜಮಾಯಿಸಿದ ಬಜರಂಗದಳ ಕಾರ್ಯಕರ್ತರು ಸುಮಾರು ಅರ್ಧ ಗಂಟೆ ಕಾಲ ಮಾನವ ಸರಪಳಿ ನಿರ್ಮಿಸಿ, ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಅವರನ್ನು ಕೊಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
Kshetra Samachara
21/02/2022 08:06 pm