ಚೆನ್ನಮ್ಮನ ಕಿತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಕೀಲಿ ಒಡೆದು ಒಳನುಗ್ಗಿದ ಖದೀಮರು, ಮನೆಯಲ್ಲಿನ ಕೆಲ ವಸ್ತುಗಳನ್ನು ತೆಗೆದುಕೊಂಡು ಪರಾರಿಯಾದ ಘಟನೆ ಚೆನ್ನಮ್ಮನ ಕಿತ್ತೂರು ಪಟ್ಟಣದ ಸಮೀಪ ಇರುವ ಬಸಾಪುರ ಗ್ರಾಮದಲ್ಲಿ ನಡೆದಿದೆ.
ಬಸಾಪುರ ಗ್ರಾಮದ ಮಲ್ಲಿಕಾರ್ಜುನ ಓಂಕಾರಿ ಎಂಬುವರ ಮನೆಯಲ್ಲಿಯೇ ಕಳ್ಳತನ ನಡೆದಿದೆ. ಮನೆಯವರು ಕೀಲಿ ಹಾಕಿಕೊಂಡು ಬೇರೆ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಈ ಕೃತ್ಯ ಎಸಗಿದ್ದಾರೆ. ಅಕ್ಕಪಕ್ಕದ ಮನೆಯವರು ಯಾರೂ ಬರಬಾರದೆಂದು ಹೊರಗಿನಿಂದ ಆ ಮನೆಯನ್ನು ಕಳ್ಳರು ಲಾಕ್ ಮಾಡಿದ್ದಾರೆ.
ಮನೆಯಲ್ಲಿನ ಕೆಲ ದಾಖಲೆ ಪತ್ರಗಳನ್ನು ಖದೀಮರು ತೆಗೆದುಕೊಂಡು ಹೋಗಿದ್ದು, ಒಂದು ಟ್ರಂಕ್‌ನ್ನು ಖದೀಮರು ಹೊಲದಲ್ಲಿ ಎಸೆದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಜ್ಞರು, ಇನ್ಸ್‌ಪೆಕ್ಟರ್ ಮಹಾಂತೇಶ ಹೊಸಪೇಟೆ, ಪಿಎಸ್ಐ ದೇವರಾಜ ಉಳ್ಳಾಗಡ್ಡಿ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Kshetra Samachara
22/02/2022 07:53 pm