ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ವಿದ್ಯಾಗಿರಿ ಠಾಣೆ ಪೊಲೀಸರ ಭರ್ಜರಿ ಕಾರ್ಯಾಚರಣೆ: ಐವರು ಕಳ್ಳರ ಬಂಧನ

ಧಾರವಾಡ: ಕಳೆದ ಜ.27 ರಂದು ಧಾರವಾಡದ ಕೇಶವನಗರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಠಾಣೆ ಪೊಲೀಸರು ಇದೀಗ ಐವರು ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಜ.27 ರಂದು ಧಾರವಾಡದ ಕೇಶವನಗರದಲ್ಲಿನ ಮಹೇಂದ್ರಕರ ಎಂಬುವವರ ಮನೆಗೆ ಕನ್ನ ಹಾಕಿದ್ದ ಖದೀಮರು ಚಿನ್ನಾಭರಣ ಹಾಗೂ ನಗದು ದೋಚಿಕೊಂಡು ಪರಾರಿಯಾಗಿದ್ದರು. ಇದೀಗ ಬಂಧಿತರಿಂದ 562 ಗ್ರಾಂ ಚಿನ್ನ 20 ಸಾವಿರ ನಗದು, 4.5 ಲಕ್ಷ ಮೌಲ್ಯದ ಎರಡು ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳ್ಳರನ್ನು ಪತ್ತೆ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರ ತಂಡಕ್ಕೆ ಪೊಲೀಸ್ ಆಯುಕ್ತ ಲಾಬುರಾಮ್ ಅವರು 25 ಸಾವಿರ ನಗದು ಬಹುಮಾನ ಘೋಷಣೆ ಮಾಡಿದ್ದಾರೆ. ಒಂದು ತಿಂಗಳ ಒಳಗಾಗಿಯೇ ಪೊಲೀಸರು ಇದೀಗ ಖದೀಮರ ಗ್ಯಾಂಗ್‌ನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Edited By : Shivu K
Kshetra Samachara

Kshetra Samachara

23/02/2022 08:04 am

Cinque Terre

45.17 K

Cinque Terre

7

ಸಂಬಂಧಿತ ಸುದ್ದಿ