ನವಲಗುಂದ: ಪಟ್ಟಣದ ನವೀನ್ ಪಾರ್ಕ್ ಹೋಟೆಲ್‌ನಲ್ಲಿ ಶುಕ್ರವಾರ (ಫೆ.18ರಂದು) ನಡೆದ ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಮೃತ ಮಹಿಳೆಯನ್ನು ಯಮನವ್ವ ಹುಣಸಿಮರದ ಎಂದು ಗುರುತಿಸಲಾಗಿದೆ. ಇದೇ ತಿಂಗಳ 18 ಶುಕ್ರವಾರ ರಾತ್ರಿ 10 ಗಂಟೆಗೆ ನವೀನ್ ಪಾರ್ಕ್ ಹೋಟೆಲ್ ಆಕಸ್ಮಿಕವಾಗಿ ಶಾರ್ಟ್ ಸರ್ಕೀಟ್ ಆಗಿ ಸಿಲಿಂಡರ್ ಪೈಪ್ಲೈನ್ ಬ್ಲಾಸ್ಟ್ ಆದ ಪರಿಣಾಮ ಕೂಲಿ ಕೆಲಸ ಮಾಡುತ್ತಿದ್ದ ಯಮನವ್ವ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯಮನವ್ವ ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ಈ ಸಂಬಂಧ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
23/02/2022 09:54 pm