ಅಣ್ಣಿಗೇರಿ: ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪರಿಣಾಮ ರೈತರು ತತ್ತರಿಸಿ ಹೋಗಿದ್ದಾರೆ. ಸಾಲಬಾಧೆ ರೈತರನ್ನು ಕಾಡುತ್ತಿದ್ದು ಮತ್ತೋರ್ವ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಕಳೆದ ಹತ್ತು ದಿನಗಳ ಹಿಂದಷ್ಟೇ ಅಣ್ಣಿಗೇರಿ ತಾಲೂಕಿನ ತುಪ್ಪದಕುರಹಟ್ಟಿ ಗ್ರಾಮದ ರೈತ ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದ. ಇದರ ಬೆನ್ನಲ್ಲೇ ಮತ್ತೊಬ್ಬ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಾಲೂಕಿನ ಮನಕವಾಡ ಗ್ರಾಮದ ಚನ್ನಬಸಪ್ಪ ನೀಲಪ್ಪ ಪಲ್ಯದ ಎಂಬ ರೈತ (45) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರೈತ ಹುಬ್ಬಳ್ಳಿ ಮತ್ತು ನವಲಗುಂದ ಖಾಸಗಿ ಬ್ಯಾಂಕಿನಲ್ಲಿ ಹಾಗೂ ಊರಲ್ಲಿ ಕೈಗಡ ಸಾಲ ಮಾಡಿದ್ದು, ಈ ಬಾರಿ ಬೆಳೆ ಸರಿಯಾಗಿ ಬಂದಿರಲಿಲ್ಲ. ಸಾಲ ತೀರಿಸಲಾಗದೇ ಮನೆಯಲ್ಲಿ ನೇಣು ಹಾಕಿಕೊಂಡಿದ್ದಾರೆ. ಈ ಕುರಿತು ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
24/02/2022 07:28 pm