ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೆಯುಡಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದವರ ಬಂಧನ

ಧಾರವಾಡ: ನಿನ್ನೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸಿಬ್ಬಂದಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.

ಧಾರವಾಡದ ದಾನುನಗರದಲ್ಲಿ ಈ ಘಟನೆ ನಡೆದಿತ್ತು. ಈರಣ್ಣ ಪಾಟೀಲ್ ಎಂಬಾತ ತನ್ನ ಸಹಚರರೊಂದಿಗೆ ಸೇರಿಕೊಂಡು ಭರತ ಪಟ್ಟಣಶೆಟ್ಟಿ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಪರಾರಿಯಾಗಿದ್ದರು.

ಭರತ ಧಾರವಾಡ ಕೆಯುಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಹಲ್ಲೆ ನಡೆಸಿದ ಆರೋಪಿ ಈರಣ್ಣ ಪಾಟೀಲ ತಮ್ಮ ಮನೆಗೆ ಭರತನನ್ನು ಊಟಕ್ಕೆಂದು ಕರೆದುಕೊಂಡು ಹೋಗಿ ಮಾರಣಾಂತಿಕ ಹಲ್ಲೆ ಮಾಡಿದ್ದ. ಭರತ ಗಂಭೀರವಾಗಿ ಗಾಯಗೊಂಡಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

Edited By : Shivu K
Kshetra Samachara

Kshetra Samachara

25/02/2022 08:24 am

Cinque Terre

71.55 K

Cinque Terre

1

ಸಂಬಂಧಿತ ಸುದ್ದಿ