ಹುಬ್ಬಳ್ಳಿ: ಬ್ಯಾಂಕ್ ವ್ಯವಸ್ಥಾಪಕರೊಬ್ಬರು ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಿ ಸಾಲ ಮಂಜೂರು ಮಾಡಲು ಸಹಕರಿಸಿದ ಆರೋಪ ಕೇಳಿ ಬಂದಿದ್ದು, ಒಟ್ಟು 32 ಲಕ್ಷ ರೂ. ವಂಚನೆ ಮಾಡಿದ್ದಾರೆ ಎನ್ನಲಾಗಿದೆ.
2009ರಲ್ಲಿ ಮಧುರಾ ಕಾಲೋನಿಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವ್ಯವಸ್ಥಾಪಕಾರಿಗಿದ್ದ ಸಂಧ್ಯಾ ಎಂಬುವರು ನಕಲಿ ವೇತನ ಪ್ರಮಾಣ ಪತ್ರ ಸೃಷ್ಟಿಸಿ ತಲಾ 5 ಲಕ್ಷ ರೂ. ನಂತೆ ಒಟ್ಟು 7 ಜನರಿಗೆ 35 ಲಕ್ಷ ರೂ. ಸಾಲ ಮಂಜೂರು ಮಾಡಲು ಸಹಕರಿಸಿದ್ದು, ಸಾಲ ಮರುಪಾವತಿ ಮಾಡದೆ ಬ್ಯಾಂಕ್‌ಗೆ ಮೋಸ ಮಾಡಿದ್ದಾರೆ ಎಂದು ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
05/03/2022 08:30 am