ಹುಬ್ಬಳ್ಳಿ: ನಗರದ ಅಪಾರ್ಟ್ಮೆಂಟ್‌ವೊಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಗೋಕುಲ ರಸ್ತೆಯ ಪೊಲೀಸ್ ಠಾಣೆ ವ್ಯಾಪ್ತಿಯ ಡಾಲರ್ಸ್ ಕಾಲೋನಿಯ ನಿಕೇತನ ಅಪಾರ್ಟ್ಮೆಂಟ್‌ನಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ದಾಳಿ ವೇಳೆ ವೇಶ್ಯಾವಾಟಿಕೆ ನಡೆಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ, ಇಬ್ಬರು ಯುವತಿಯರನ್ನು ರಕ್ಷಿಸಿದ್ದಾರೆ.
ಹುಬ್ಬಳ್ಳಿ ಹಾಗೂ ತುಮಕೂರು ಮೂಲಕ ಅಮಾಯಕ ಯುವತಿಯರನ್ನು ಕೆಲಸ ಕೊಡಿಸುವುದಾಗಿ ನಗರಕ್ಕೆ ಕರೆತಂದು, ತದನಂತರ ಹೆಚ್ಚು ಹಣದ ಆಮಿಷ ಒಡ್ಡಿ ವೇಶ್ಯಾವಾಟಿಕೆ ದಂಧೆಯಲ್ಲಿ ದೂಡಲಾಗಿತ್ತು ಎಂದು ತಿಳಿದುಬಂದಿದೆ. ಗಿರಾಕಿಗಳಿಗೆ ಯುವತಿಯರ ಫೋಟೋಗಳನ್ನು ಕಳುಹಿಸಿ, ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು ಎಂದು ಬಲ್ಲ ಮೂಲಗಳಿಂದ ಮಾಹಿತಿ ದೊರೆತಿದೆ.
ಘಟನೆಗೆ ಸಂಬಂಧಿಸಿದಂತೆ ಗೋಕುಲ ರಸ್ತೆಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Kshetra Samachara
05/03/2022 10:39 pm