ಧಾರವಾಡ: ಧಾರವಾಡದ ಹೊಸಯಲ್ಲಾಪುರ ಪ್ರದೇಶದಲ್ಲಿ ಬಾಡಿ ಬಿಲ್ಡರ್‌ವೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಪ್ರಭಾಕರ ಆನಂದಪ್ಪ ಕಬ್ಬಾರ ಎಂಬಾತನೇ ಮೃತಪಟ್ಟ ದುರ್ದೈವಿಯಾಗಿದ್ದಾನೆ. ಮನೆಯ ಮೇಲ್ಛಾವಣಿಯಲ್ಲಿ ನೇಣು ಹಾಕಿಕೊಂಡಿದ್ದಾನೆ.
ಸುಮಾರು 40 ವರ್ಷದ ಪ್ರಭಾಕರ, ಕೆಲವು ದಿನಗಳಿಂದ ಆಟೊ ಓಡಿಸಿಕೊಂಡು ಜೀವನ ನಡೆಸುತ್ತಿದ್ದ. ಇಸ್ಪೀಟ್ ಆಟದಿಂದ ಸಾಕಷ್ಟು ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಹೀಗಾಗಿ ಹೀಗಾಗಿ ಸಾಲ ಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಈ ಸಂಬಂಧ ಶಹರ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
08/03/2022 07:12 am