ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಮ್ಸ್ ವಸತಿ ಗೃಹದಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ

ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಕೆಲಸ ನಿರ್ವಹಿಸುವ ಸಿಬ್ಬಂದಿ ವಸತಿ ಗೃಹಗಳಲ್ಲಿ ಕಳ್ಳತನ ಪ್ರಕರಣಗಳು ನಡೆಯುತ್ತಲೇ ಇದ್ದರೂ ಸೂಕ್ತ ಕ್ರಮಗಳು ಮಾತ್ರ ಜಾರಿಯಾಗಿಲ್ಲ.

ಹೌದು. ನಿನ್ನೆಯಷ್ಟೇ ಸಿಬ್ಬಂದಿಯೊಬ್ಬರು ಊರಿಗೆ ಹೋಗಿದ್ದ ವೇಳೆಯಲ್ಲಿ ಮನೆಗೆ ನುಗ್ಗಿದ ಖದೀಮರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಎಲಿಜಬೆತ್ ಎಂಬುವ ನರ್ಸಿಂಗ್ ಸಿಬ್ಬಂದಿಯ ಮನೆಯಲ್ಲಿಯೇ ಕಳ್ಳರು ಕೈಚಳಕ ತೋರಿಸಿದ್ದು, ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸ್ಥಳಕ್ಕೆ ವಿದ್ಯಾನಗರದ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಒಟ್ಟಿನಲ್ಲಿ ಒಂದಿಲ್ಲೊಂದು ರೀತಿಯಲ್ಲಿ ಕಿಮ್ಸ್ ಸಿಬ್ಬಂದಿ ವಸತಿ ಗೃಹಗಳಲ್ಲಿ ಸಾಕಷ್ಟು ಕಳ್ಳತನ ಪ್ರಕರಣ ನಡೆಯುತ್ತಿದ್ದರೂ ಇಂತಹ ಪ್ರಕರಣಕ್ಕೆ ಮಾತ್ರ ಬ್ರೇಕ್ ಇಲ್ಲದಂತಾಗಿದೆ.

Edited By : Manjunath H D
Kshetra Samachara

Kshetra Samachara

09/03/2022 07:21 pm

Cinque Terre

47.13 K

Cinque Terre

1

ಸಂಬಂಧಿತ ಸುದ್ದಿ