ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮತ್ತೆ ಹರಿಯಿತು ನೆತ್ತರು;ಮಹಿಳೆ ಕೊಲೆಗೆ ಬೆಚ್ಚಿ ಬಿದ್ದ ಹುಬ್ಬಳ್ಳಿ ಜನ

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕಡೆಯಲ್ಲಿ ನೆತ್ತರು ಹರೆದಿದ್ದು, ಬೆಳ್ಳಂಬೆಳಿಗ್ಗೆ ಹುಬ್ಬಳ್ಳಿಯ ಜನರು ಬೆಚ್ಚಿ ಬಿದ್ದಿದ್ದಾರೆ.

ಹೌದು. ಹುಬ್ಬಳ್ಳಿಯ ಕೃಷ್ಣ ಭವನದ ಎದುರಿನಲ್ಲಿ ಮಹಿಳೆಯೊಬ್ಬಳು ಕೊಲೆಯಾದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಬೆಳಿಗ್ಗೆ ರಕ್ತ ನೋಡಿದ ಜನರು ಆತಂಕಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲೆಯಾದ ಮಹಿಳೆಯ ಹೆಸರು ಸುಮಾ ಎಂದು ಹೇಳಲಾಗಿದ್ದು, ಪ್ರಕರಣದ ಹೆಚ್ಚಿನ ಮಾಹಿತಿ ತನಿಖೆಯ ನಂತರವೇ ಗೊತ್ತಾಗಲಿದೆ ಎನ್ನುತ್ತಾರೆ ಡಿಸಿಪಿ ಸಾಹಿಲ್ ಬಾಗ್ಲಾ.

ಒಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಮಾರಕಾಸ್ತ್ರದಿಂದ ಕೊಲೆಗಳು ನಡೆಯುತ್ತಲೇ ಇದೆ. ಮಹಿಳೆಯೊಬ್ಬಳನ್ನು ನಡುರಸ್ತೆಯಲ್ಲಿ ಕೊಲೆ ಮಾಡಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಕೂಡಲೇ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕಿದೆ.

Edited By : Manjunath H D
Kshetra Samachara

Kshetra Samachara

12/03/2022 03:11 pm

Cinque Terre

52.26 K

Cinque Terre

4

ಸಂಬಂಧಿತ ಸುದ್ದಿ