ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚಲಿಸುವ ರೈಲಿಗೆ ತಲೆಯೊಡ್ಡಿ ಆತ್ಮಹತ್ಯೆ ಶರಣಾದ ದಂಪತಿ.!

ಹುಬ್ಬಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಚಲಿಸುವ ರೈಲಿಗೆ ತಲೆಕೊಟ್ಟು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.

ಹೌದು. ರೈಲ್ವೇ ನಿಲ್ದಾಣದ ಕೂಗಳತೆ ದೂರದಲ್ಲಿಯೇ ದಂಪತಿ ರೈಲಿಗೆ ಬಿದ್ದು, ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಕೆಲವೇ ಸಮಯದ ಹಿಂದೆ ಬೆಳಕಿಗೆ ಬಂದಿದೆ. ಸುಮಾರು 35ರಿಂದ 40 ವಯಸ್ಸಿನ ಮಹಿಳೆ ಹಾಗೂ 45ರಿಂದ 50 ವಯಸ್ಸಿನ ಪುರುಷ ಸಾವಿಗೀಡಾಗಿದ್ದು, ದಂಪತಿಯು ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದ ಹಾಗೇ ಸ್ಥಳಕ್ಕೆ ತೆರಳಿದ ರೈಲ್ವೇ ಠಾಣೆಯ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಸಾವಿಗೀಡಾಗಿರುವ ದಂಪತಿಯ ಮಾಹಿತಿ ಕಲೆ ಹಾಕಲು ಮುಂದಾಗಿದ್ದಾರೆ.

Edited By : Vijay Kumar
Kshetra Samachara

Kshetra Samachara

12/03/2022 08:34 pm

Cinque Terre

24.53 K

Cinque Terre

0

ಸಂಬಂಧಿತ ಸುದ್ದಿ