ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಅರವಿಂದ ನಗರದ ಪಿಎನ್ ಟಿ ಕ್ವಾರ್ಟಸ್ ಬಳಿ ಶುಕ್ರವಾರ ಬೆಳಗಿನ ಜಾವ ರೌಡಿಶೀಟರ್ ಅಕ್ಬರ್ ಮುಲ್ಲಾನನ್ನು ಬರ್ಬರವಾಗಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಮತ್ತೆ ನಾಲ್ವರನ್ನು ಬಂಧಿಸಿದ್ದಾರೆ.
ಅಕ್ಟರ್‌ನನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಸದಾನಂದ ಕುರ್ಲಿ ಎಂಬಾತ ತಾನೇ ಕೊಲೆ ಮಾಡಿರುವುದಾಗಿ ಹೇಳಿ ಪೊಲೀಸರಿಗೆ ಶರಣಾಗಿದ್ದ.
ಈ ಕುರಿತು ತನಿಖೆ ಆರಂಭಿಸಿರುವ ಡಿಸಿಪಿ ಸಾಹಿಲ್ ಬಾಗ್ಲಾ ನೇತೃತ್ವದ ತಂಡ, ಈಗ ಮತ್ತೆ ನಾಲ್ವರನ್ನು ಬಂಧಿಸಿದೆ. ಈ ಮೂಲಕ ಬಂಧಿತರ ಸಂಖ್ಯೆ ಐದಕ್ಕೇರಿದೆ. ಹಣಕಾಸಿನ ವಿಚಾರಕ್ಕೆ ಕೊಲೆ ನಡೆದಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತಾದರೂ ಕೊಲೆಗೆ ನಿಖರ ಕಾರಣ ತಿಳಿಯಬೇಕಿದೆ. ಇನ್ನೂ ಹಲವರ ವಿಚಾರಣೆ ನಡೆಸಿರುವ ಪೊಲೀಸರು, ತನಿಖೆ ಚುರುಕುಗೊಳಿಸಿದ್ದಾರೆ.
Kshetra Samachara
14/03/2022 11:17 am