ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮಹಿಳೆಯ ಕೊಲೆ ಮಾಡಿದ ಆರೋಪಿ ಬಂಧಿಸಿದ ಶಹರ ಠಾಣೆ ಪೊಲೀಸರು

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ದಾವಣಗೆರೆ ಮೂಲದ ಮಹಿಳೆಯೊಬ್ಬಳನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಹುಬ್ಬಳ್ಳಿಯ ಶಹರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕಳೆದ ನಾಲ್ಕೈದು ದಿನಗಳ ಹಿಂದಷ್ಟೇ ರೌಡಿಶೀಟರ್ ಅಕ್ಬರ್ ಮುಲ್ಲಾ ಕೊಲೆ ಪ್ರಕರಣ ಮಾಸುವ ಮುನ್ನವೇ ದಾವಣಗೆರೆ ಮೂಲದ ಸುಮಾ ಎಂಬ ಮಹಿಳೆಯನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿತ್ತು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದ ಶಹರ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿಯ ಕೃಷ್ಣಭವನದ ಎದುರಿನಲ್ಲಿ ಕೊಲೆ ಮಾಡಿದ್ದ ಪ್ರಕರಣವನ್ನು ಬೆನ್ನಟ್ಟಿದ್ದ ಶಹರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ತನಿಖೆ ಮುಂದುವರೆಸಿದ್ದಾರೆ.

Edited By : Manjunath H D
Kshetra Samachara

Kshetra Samachara

16/03/2022 07:04 pm

Cinque Terre

48.96 K

Cinque Terre

6

ಸಂಬಂಧಿತ ಸುದ್ದಿ