ಹುಬ್ಬಳ್ಳಿ: ರಾಜಸ್ಥಾನದ ಅಜ್ಮಿರ್ ಹಾಗೂ ಬಿಲವಾಡ ಮೂಲದ ಮೂರು ಜನ ನಟೋರಿಯಸ್ ದರೋಡೆಕೋರರನ್ನು ಬಂಧಿಸುವಲ್ಲಿ ಹುಬ್ಬಳ್ಳಿಯ ಕೇಶ್ವಾಪುರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಬರೋಬ್ಬರಿ 7.5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದು, ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ. ಲೈಟ್ ಬಲೂನ್ ಮಾರಾಟದದ ಸೋಗಿನಲ್ಲಿ ರೈಲ್ವೆ ಮೂಲಕ ರಾಜ್ಯಕ್ಕೆ ಆಗಮಿಸಿದ್ದ ನಟೋರಿಸ್ ದರೋಡೆಕೋರರು, ಹುಬ್ಬಳ್ಳಿ ಧಾರವಾಡ, ಬೆಳಗಾವಿ ಸೇರಿದಂತೆ ಇತರೆ ನಗರದಲ್ಲಿ ಸಂಚರಿಸಿ, ಬೀಗ ಹಾಕಿದ ಮನೆಗಳನ್ನು ಗುರುತಿಸಿ ದರೋಡೆ ಮಾಡುತ್ತಿದ್ದರು.
ಹುಬ್ಬಳ್ಳಿಯ ಕೇಶ್ವಾಪುರ ಮತ್ತು ಗೋಕುಲ ರಸ್ತೆಯ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಬೆಳಗಾವಿ ಜಿಲ್ಲೆಯ ಟಿಳಕವಾಡಿ ಠಾಣಾ ವ್ಯಾಪ್ತಿಯ ನಡೆದಿದ್ದ ಮೂರು ಮನೆಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಒಂದು ವಾರದಿಂದ ರಾಜಸ್ಥಾನಕ್ಕೆ ತೆರಳಿ ಕಾರ್ಯಚರಣೆ ನಡೆಸಿದ್ದ ಕೇಶ್ವಾಪುರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಜಗದೀಶ್ ಹಂಚಿನಾಳ ನೇತೃತ್ವದ ತಂಡ ಮೂರು ಜನ ದರೋಡೆಕೋರರನ್ನು ಬಂಧಿಸಿ, ಅವರಿಂದ 171 ಗ್ರಾಂ ಚಿನ್ನಾಭರಣ ಜಪ್ತಿ ಮಾಡಿದೆ.
Kshetra Samachara
21/03/2022 11:42 am