ಹುಬ್ಬಳ್ಳಿ: ಎಲೆಕ್ಟ್ರಿಕಲ್ ಸ್ಕೂಟರ್ ಕಡಿಮೆ ಬೆಲೆಗೆ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನಿಗೆ ಆನ್ ಲೈನ್ ವಂಚನೆ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಸುರೇಶ್ ಕುಮಾರ್ ಪಾಲಗೋತಾ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದಾನೆ. ಸುರೇಶ್ ಕುಮಾರ್ 499 ರೂಪಾಯಿ ತುಂಬಿ ಕೋಲಾ ಎಲೆಕ್ಟ್ರಿಕ್ ಸ್ಕೂಟರ್ ಬುಕ್ ಮಾಡಿದ್ದರು.
ಅದೇ ದಿನ ಅಪರಿಚಿತ ವ್ಯಕ್ತಿ ಕರೆ ಮಾಡಿ ಮಾತನಾಡಿದ್ದರು. ಡಿಸ್ಕೌಂಟ್ ಕೊಡಿಸುವುದಾಗಿ ಹೇಳಿ ವಿವಿಧ ಶುಲ್ಕದ ಹೆಸರಲ್ಲಿ ಒಂದು ಲಕ್ಷ ರೂಪಾಯಿ ಹಣ ಹಾಕಿಸಿಕೊಂಡು ವಂಚನೆ ಮಾಡಿದ್ದಾರೆ. ಈ ಕುರಿತು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Kshetra Samachara
24/03/2022 05:19 pm