ಧಾರವಾಡ: ಕೋರ್ಟ್ ಸರ್ಕಲ್ ಹತ್ತಿರವಿರುವ ಪೆಟ್ರೋಲ್ ಬಂಕ್ ಬಳಿ ನಿರ್ಮಾಣ ಹಂತದ ಕಟ್ಟಡದ ಮೇಲಿಂದ ಬಿದ್ದು, ವ್ಯಕ್ತಿಯೊಬ್ಬ ಸಾವನಪ್ಪಿದ ಘಟನೆ ಸಂಭವಿಸಿದೆ.
ಮಾಳಾಪೂರ ನಿವಾಸಿ ಸಾದೀಕ್ ಹಂಚಿನಮನಿ (40) ಎಂಬುವವರೇ ಮೃತಪಟ್ಟ ವ್ಯಕ್ತಿ. ನಿರ್ಮಾಣ ಹಂತದ ಕಟ್ಟದಲ್ಲಿ ಕೆಲಸ ಮಾಡುತ್ತಿದ್ದ ಸಾದೀಕ್ ಅವರು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸೇರಿಸಲು ಮುಂದಾಗಿದ್ದಾರೆ. ಆದರೆ, ಮಾರ್ಗ ಮಧ್ಯದಲ್ಲಿಯೇ ಸಾದೀಕ್ ಸಾವನ್ನಪ್ಪಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
26/03/2022 10:08 pm