ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯ ಬಂಧನ

ಧಾರವಾಡ: ಮನೆಯಲ್ಲಿ ಯಾರೂ ಇಲ್ಲದ್ದನ್ನು ನೋಡಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳನೋರ್ವ ನಗ-ನಗದು ದೋಚಿಕೊಂಡು ಪರಾರಿಯಾಗಿದ್ದ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧನ ಮಾಡುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಗವಿಶಿದ್ದಪ್ಪ ಅಲಿಯಾಸ್ ಶಿವಣ್ಣ ಕಣಕೇರಿ ಎಂದು ಗುರುತಿಸಲಾಗಿದೆ. ಈ ಆರೋಪಿ ಧಾರವಾಡ ಚಾಲುಕ್ಯ ನಗರ ಬಡಾವಣೆಯಲ್ಲಿನ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿ 4 ತೊಲೆ ಚಿನ್ನ ಹಾಗೂ ಒಂದು ಲಕ್ಷ ರೂಪಾಯಿ ಲೂಟಿ ಮಾಡಿದ್ದ.

ಇದೀಗ ಬಂಧಿತ ಆರೋಪಿ ಗವಿಶಿದ್ದಪ್ಪನಿಂದ 120 ಗ್ರಾಂ (12ತೊಲೆ) ಚಿನ್ನ ವಶಕ್ಕೆ ಪಡೆಯಲಾಗಿದೆ. ಆದರೆ, ಹಣವನ್ನು ವಶಕ್ಕೆ ಪಡೆದಿಲ್ಲ.

Edited By : Nagaraj Tulugeri
Kshetra Samachara

Kshetra Samachara

27/03/2022 10:51 am

Cinque Terre

26.77 K

Cinque Terre

1

ಸಂಬಂಧಿತ ಸುದ್ದಿ