ಹುಬ್ಬಳ್ಳಿ: ಐಪಿಎಲ್ ಕ್ರಿಕೆಟ್ ಟೂರ್ನಿ ಮೇಲೆ ಹೊಸೂರ ಕ್ರಾಸ್ ಬಳಿ ಬೆಟ್ಟಿಂಗ್ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಪನಗರ ಠಾಣೆ ಪೊಲೀಸರು ಬಂಧಿಸಿ, ಮೂರು ಮೊಬೈಲ್ ಹಾಗೂ 6,100 ರೂ. ವಶಪಡಿಸಿಕೊಂಡಿದ್ದಾರೆ.
ಹೊಸೂರಿನ ಸಂಜು ರೋಣದ, ಮನೀಷ ಕೊರವರ ಬಂಧಿತ ಆರೋಪಿಗಳು. ಅರುಣ ಕಠಾರೆ ತಪ್ಪಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/03/2022 10:19 am