ಹುಬ್ಬಳ್ಳಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಇಲ್ಲಿನ ಗೋಕುಲ ರಸ್ತೆ ರವಿ ನಗರದಲ್ಲಿ ರಸ್ತೆ ಬದಿ ಮಂಗಳವಾರ ನಾಲ್ವರನ್ನು ಗೋಕುಲ ರೋಡ್ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 25,280 ರೂ. ನಗದು, 9 ಮೊಬೈಲ್‌ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ವಿಕಾಸನಗರ ಪೆಟ್ರೋಲ್ ಬಂಕ್ ಬಳಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ವ್ಯಕ್ತಿಯೊಬ್ಬನನ್ನು ಉಪನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿ 3,300 ರೂ. ನಗದು ಹಾಗೂ ಎರಡು ಮೊಬೈಲ್‌ಫೋನ್ ವಶಪಡಿಸಿಕೊಂಡಿದ್ದಾರೆ. ಮುಂಬೈನಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ ಬೆಂಗಳೂರು ಹಾಗೂ ಕೋಲ್ಕತ ನೈಟ್ ರೈಡರ್ ನಡುವಿನ ಐಪಿಎಲ್ ಟಿ-20 ಪಂದ್ಯದ ಮೇಲೆ ಬೆಟ್ಟಿಂಗ್ ಆಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಇನ್‌ಸ್ಪೆಕ್ಟರ್ ರವಿಚಂದ್ರ ಡಿ.ಬಿ. ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ. ಮತ್ತೊಬ್ಬ ಆರೋಪಿ ಪರಾರಿಯಾಗಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದೆ.
Kshetra Samachara
31/03/2022 08:50 am