ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: IPL ಕ್ರಿಕೆಟ್ ಬೆಟ್ಟಿಂಗ್-ಮೂವರ ಅರೆಸ್ಟ್

ಹುಬ್ಬಳ್ಳಿ: ನಗರದ ಕ್ರಿಶ್ಚಿಯನ್ ಕಾಲೋನಿಯ ದೊಡ್ಡಮನಿ ಮೈದಾನದಲ್ಲಿ ಐಪಿಎಲ್ ಕ್ರಿಕೆಟ್ ಬೆಟಿಂಗ್ ಆಡುತ್ತಿದ್ದ ಮೂವರು ಆರೋಪಿಗಳನ್ನು ಬೆಂಡಿಗೇರಿ ಪೊಲೀಸರು ಬಂಧಿಸಿ ಅವರಿಂದ 18,000 ರೂ. ಹಾಗೂ 10 ಸಾವಿರದ ಎರಡು ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಪುಣೆಯಲ್ಲಿ ನಡೆಯುತ್ತಿದ್ದ ಐಪಿಎಲ್‌ನ ಸನ್‌ರೈಜರ್ಸ್ ಹೈದರಾಬಾದ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳ ನಡುವಿನ ಪಂದ್ಯ ನಡೆದಾಗ ಓವರ್,ವಿಕೆಟ್ ಮತ್ತು ಸೋಲು,ಗೆಲುವಿನ ಮೇಲೆ ಬೆಟಿಂಗ್ ಆಡುತ್ತಿರುವಾಗ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ. ನಂತರ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

01/04/2022 08:47 am

Cinque Terre

24.01 K

Cinque Terre

0

ಸಂಬಂಧಿತ ಸುದ್ದಿ