ನವಲಗುಂದ : ಮದುವೆಗೆ ನಿರಾಕರಿಸಿದಕ್ಕೆ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನವಲಗುಂದ ಪಟ್ಟಣದಲ್ಲಿ ನಡೆದಿದೆ. ಘಟನೆಯಿಂದ ಯುವಕ ಯುವತಿ ಇಬ್ಬರ ಸ್ಥಿತಿಯೂ ಚಿಂತಾಜನಕವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಯುವತಿಯನ್ನು ನವಲಗುಂದ ತಾಲೂಕಿನ ತಡಹಾಳ ಗ್ರಾಮದ ಸಾವಿತ್ರಿ ಮುತ್ತಪ್ಪ ನರಗುಂದ ಹಾಗೂ ಯುವಕನನ್ನು ಮಲ್ಲಪ್ಪ ದುರ್ಗಪ್ಪ ಮಾದರ ಎಂದು ತಿಳಿದು ಬಂದಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಗೆ ಸಂಬಂಧಿಸಿದಂತೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
04/04/2022 09:24 pm