ಧಾರವಾಡ: ಧಾರವಾಡದ ಹಿರಿಯ ಸಂಶೋಧಕ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಆರೋಪಿಗಳನ್ನು ಪೊಲೀಸರು ವಿಚಾರಣೆಗಾಗಿ ಧಾರವಾಡ ನಾಲ್ಕನೇ ಹೆಚ್ಚುವರಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಅಮೂಲ್ ಕಾಳೆ ಹಾಗೂ ಪ್ರವೀಣ ಚತುರ್ ಎಂಬ ಆರೋಪಿಗಳನ್ನು ಪೊಲೀಸರು ಬಂದೋಬಸ್ತ್ ಮಧ್ಯೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬೆಂಗಳೂರು ಕಾರಾಗೃಹದಿಂದ ಅಮೂಲ್ ಕಾಳೆಯನ್ನು ಹಾಗೂ ಧಾರವಾಡ ಕೇಂದ್ರ ಕಾರಾಗೃಹದಿಂದ ಪ್ರವೀಣ ಚತುರ್‌ನನ್ನು ಪೊಲೀಸರು ನ್ಯಾಯಾಲಯಕ್ಕೆ ಕರೆ ತಂದಿದ್ದಾರೆ.
ಸದ್ಯ ಇಬ್ಬರೂ ಆರೋಪಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದ್ದು, ವಿಚಾರಣೆ ಬಳಿಕ ಮತ್ತೆ ಇಬ್ಬರೂ ಆರೋಪಿತರನ್ನು ಭದ್ರತೆ ಮಧ್ಯೆಯೇ ಕಾರಾಗೃಹಕ್ಕೆ ಕರೆದುಕೊಂಡು ಹೋಗಲಾಗುತ್ತದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/04/2022 12:43 pm