ಹುಬ್ಬಳ್ಳಿ: ಕೇಶ್ವಾಪೂರ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ ಮೂವರು ಅಂತರರಾಜ್ಯ ಮಾರಾಟಗಾರರನ್ನು ಹು-ಧಾ ಸೈಬರ್, ಆರ್ಥಿಕ ಮತ್ತು ಮಾದಕ ವಸ್ತುಗಳ ಅಪರಾಧ (ಸಿಇಎನ್) ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಬೈಕ್‌ನಲ್ಲಿ ಇಟ್ಟುಕೊಂಡು ಹೊರಟಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಗಾಂಜಾ ಆರೋಪಿಗಳನ್ನು ಹು-ಧಾ ಸೈಬರ್, ಆರ್ಥಿಕ ಮತ್ತು ಮಾದಕ ವಸ್ತುಗಳ ಅಪರಾಧ (ಸಿಇಎನ್) ಠಾಣೆ ಇನ್‌ಸ್ಪೆಕ್ಟರ್ ಎಂ.ಎಸ್. ಹೂಗಾರ ಬಂಧಿಸಿದ್ದಾರೆ. ಆರೋಪಿತರಿಂದ 2 ಕೆಜಿ 125 ಗ್ರಾಂ ಗಾಂಜಾ ಸೇರಿದಂತೆ ಇತರೆ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಂಧಿತ ಆರೋಪಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Kshetra Samachara
09/04/2022 09:34 am