ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯಲ್ಲಿ ತಡರಾತ್ರಿ ನಡೆದ ಕೋಮು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಗೂ ಮುನ್ನ ನಡೆದ ಭಯಾನಕ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಹಿಂದೂ ಯುವಕನೊಬ್ಬ ಮುಸ್ಲಿಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾ ಮಸೀದಿಯ ಮೇಲೆ ಕೇಸರಿ ಧ್ವಜ ಹಾರಿಸಿದ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಈ ಬೆನ್ನಲ್ಲೇ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ದೊಡ್ಡಮಟ್ಟದ ಗಲಾಟೆ ನಡೆದಿದ್ದು, ಕಲ್ಲು ತೂರಾಟ ನಡೆದಿದೆ. ಈ ಘಟನೆಯ ಕುರಿತು ಎರಡು ಗುಂಪುಗಳ ಕಲ್ಲು ತೂರಾಟ ನಡೆದು ಪೊಲೀಸ್ ವಾಹನ ಜಖಂಗೊಂಡಿದೆ. ನಾಲ್ವರು ಪೊಲೀಸರು ಸೇರಿದಂತೆ 8 ಜನರು ಗಾಯಗೊಂಡಿದ್ದಾರೆ.
ಏಕಾಏಕಿ ಗಲಾಟೆ ನಡೆದಿದ್ದು, ಕಲ್ಲು ತೂರಾಟ ನಡೆಸಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಒಂದು ಕೋಮಿನ ಯುವಕರು ಗಲಾಟೆ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹುಬ್ಬಳ್ಳಿಯ ದಿಡ್ಡಿ ಹನುಮಂತ ದೇವಸ್ಥಾನದಲ್ಲಿ ಹಾಕಿದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕಲ್ಲು ತೂರಾಟ ನಡೆಸಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗುವದರ ಜೊತೆಗೆ ಪೊಲೀಸರು ಲಾಠಿ ಪ್ರಹಾರ ಮಾಡಿದ ಸಹ ಸೆರೆಯಾಗಿದೆ. ಈಗಾಗಲೇ ಪೊಲೀಸ್ ಠಾಣೆಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಯಾರು ಕೂಡ ಹೊರ ಬರದಂತೆ ಸೂಚನೆ ನೀಡಲಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾದವರನ್ನು ಗುರುತಿಸಿ ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ. ಹಳೇ ಹುಬ್ಬಳ್ಳಿ ನಿರವಮೌನ ಆವರಿಸಿದೆ. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/04/2022 09:28 am