ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಹಿಂಸಾಚಾರ: ಆರೋಪಿಗಳ ಹೆಡೆಮುರಿ ಕಟ್ಟುತ್ತಿರುವ ಪೊಲೀಸರು

ಹುಬ್ಬಳ್ಳಿ: ಕೋಮು ಗಲಭೆ ಹಿನ್ನೆಲೆಯಲ್ಲಿ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

ಶಾಂತಿಯಿಂದ ಕೂಡಿದ್ದ ಇಂಡಿಪಂಪ್ ಸರ್ಕಲ್‌ನಲ್ಲಿ ಏಕಾಏಕಿ ಅಶಾಂತಿಯನ್ನು ಹುಟ್ಟು ಹಾಕಿದ್ದು, ಈ ಘಟನೆಗೆ ಕಾರಣರಾದವರನ್ನು ಹಾಗೂ ಗಲಾಟೆ ಮಾಡಿದವರನ್ನು ಸೂಕ್ತ ತನಿಖೆಯ ಮೂಲಕ ವಶಕ್ಕೆ ಪಡೆದುಕೊಳ್ಳುತ್ತಿದ್ದಾರೆ. ಈಗಾಗಲೇ ಸಿಸಿಟಿವಿ ಕ್ಯಾಮೆರಾ ದೃಶ್ಯವನ್ನು ಆಧರಿಸಿ ಸುಮಾರು ಮೂವತ್ತಕ್ಕೂ ಹೆಚ್ಚು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ತನಿಖೆ ನಡೆಸುತ್ತಿದ್ದಾರೆ.

ಈಗಾಗಲೇ ಧಾರವಾಡ ಜಿಲ್ಲಾಡಳಿತದಿಂದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ನಿಷೇಧಾಜ್ಞೆ ಜಾರಿ ಮಾಡಿದ್ದು, ಎಲ್ಲೆಡೆಯೂ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಅಲ್ಲದೇ ಹಳೇ ಹುಬ್ಬಳ್ಳಿಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

ಮುಸ್ಲಿಂ ಧರ್ಮದ ಭಾವೈಕ್ಯತೆ ಧಕ್ಕೆ ತರುವಂತಹ ಪೋಸ್ಟ್‌ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕನ ಕಿಡಿಗೇಡಿತನದಿಂದ ವಾಣಿಜ್ಯನಗರಿಯಲ್ಲಿ ಅಶಾಂತಿ ಉಂಟಾಗಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಿ ಶಾಂತಿ ನೆಲೆಸುವಂತೆ ಮಾಡಬೇಕು ಎಂಬುವುದು ಸಾರ್ವಜನಿಕರ ಆಗ್ರಹವಾಗಿದೆ.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

17/04/2022 10:11 am

Cinque Terre

295.3 K

Cinque Terre

69

ಸಂಬಂಧಿತ ಸುದ್ದಿ