ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಟರ್ ಮೈಂಡ್ ವಾಸೀಂ ಪಠಾಣ್ ನನ್ನು 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ನಾಲ್ಕನೇ ಜೆ.ಎಂ.ಎಫ್.ಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ಹೌದು ಮಾಸ್ಟರ್ ಮೈಂಡ್ ವಾಸೀಂ ಪಠಾಣ್ ನನ್ನು ಹುಬ್ಬಳ್ಳಿಯ ಪೊಲೀಸರು 10 ದಿನ ಪೊಲೀಸ್ ಕಸ್ಟಡಿಗೆ ಕೇಳಿದ್ದರು. ಆದರೆ ನಾಲ್ಕನೇ ಹೆಚ್ಚುವರಿ ನ್ಯಾಯಾಲಯ ಐದು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.
ಇವತ್ತು ನ್ಯಾಯಾಧೀಶರ ಎದುರು ವಾಸಿಂಗೆ ಹಾಜರು ಪಡಿಸಿದ್ದು, ವಾಸಿಂ ಜೊತೆ ತೌಫಲಗೆ ಕೂಡಾ ಹಾಜರಾಗಿದ್ದ. ತೌಫಿಲ್ ಗೂ 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಇನ್ನೂ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿರುವ ವೇಳೆಯಲ್ಲಿ ತೌಫಿಲ್ ಕಣ್ಣಿರು ಹಾಕಿದ್ದಾನೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/04/2022 06:11 pm