ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೇ ಹುಬ್ಬಳ್ಳಿ ಗಲಭೆ ಕೇಸ್: ಎಐಎಂಐಎಂ ನಗರ ಅಧ್ಯಕ್ಷ ಅರೆಸ್ಟ್

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ಪ್ರಕರಣ ವಾರವೇ ಕಳೆದರೂ ಬಗೆದಷ್ಟು ಬಯಲಾಗುತ್ತಿದೆ. ಹುಬ್ಬಳ್ಳಿಯ ಗಲಭೆ ಪ್ರಕರಣದ ಮತ್ತೋರ್ವ ಪ್ರಮುಖ ಆರೋಪಿಯನ್ನು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೌದು. ಎಐಎಂಐಎಂ ನಗರ ಘಟಕದ ಅಧ್ಯಕ್ಷ ದಾದಾಪೀರ್ ಬೆಟಗೇರಿ ಬಂಧಿತ ಆರೋಪಿ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆತಂದ ಪೊಲೀಸರು ದಾದಾಪೀರ್ ಬೆಟಗೇರಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

Edited By : Vijay Kumar
Kshetra Samachara

Kshetra Samachara

24/04/2022 06:36 pm

Cinque Terre

43.17 K

Cinque Terre

20

ಸಂಬಂಧಿತ ಸುದ್ದಿ