ಧಾರವಾಡ: ಶೀಲ ಶಂಕಿಸಿದ ಪತಿರಾಯನೊಬ್ಬ ತನ್ನ ಪತ್ನಿಯನ್ನೇ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಧಾರವಾಡದ ಮೆಹಬೂಬನಗರದಲ್ಲಿ ನಡೆದಿದೆ.
ತನ್ನ ಪತ್ನಿಯ ಶೀಲ ಶಂಕಿಸಿದ್ದ ಪತಿ ಇಸಾಕ್ ಎಂಬಾತ ಆಕೆಗೆ ಕಳೆದ ಎರಡು ದಿನಗಳ ಹಿಂದೆ ಚಾಕುವಿನಿಂದ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಆತನ ಪತ್ನಿ ಆಸ್ಮಾಳನ್ನು ಧಾರವಾಡದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.
ಆದರೆ, ಇಂದು ಚಿಕಿತ್ಸೆಗೆ ಸ್ಪಂದಿಸದ ಆಸ್ಮಾ ಕೊನೆಯುಸಿರೆಳೆದಿದ್ದಾಳೆ. ಪತ್ನಿಯ ಸಾವಿನ ಸುದ್ದಿ ತಿಳಿದ ತಕ್ಷಣ ಪತಿ ಇಸಾಕ್ ತಾನೇ ಉಪನಗರ ಠಾಣೆಗೆ ಹೋಗಿ ಶರಣಾಗಿದ್ದಾನೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Kshetra Samachara
28/04/2022 03:39 pm