ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಯೋರ್ವಳು ತಾನು ಫೇಲಾಗುತ್ತೇನೆ ಎಂಬ ಭಯದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಗ್ರಾಮದಲ್ಲಿ ನಡೆದಿದೆ.
ಪ್ರಿಯಾಂಕಾ ತಳವಾರ (19) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆ ಮಾಡಿಕೊಂಡವಳು.
ಮೊನ್ನೆಯಷ್ಟೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದ ಪ್ರಿಯಾಂಕಾ ಪರೀಕ್ಷೆಯಲ್ಲಿ ಫೇಲಾಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.
Kshetra Samachara
30/04/2022 11:07 pm