ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಆ್ಯಸಿಡ್ ದಾಳಿಕೋರನಿಗೆ ಕಠಿಣ ಶಿಕ್ಷೆ ಆಗಬೇಕು; ನಟಿ ಅಕ್ಷತಾ ಪಾಂಡವಪುರ

ಹುಬ್ಬಳ್ಳಿ: ಬೆಂಗಳೂರಿನಲ್ಲಿ ನಡೆದ ಯುವತಿಯ ಮೇಲಿನ ಆ್ಯಸಿಡ್ ದಾಳಿ ಖಂಡನೀಯ. ದಾಳಿ ಮಾಡಿ ಪರಾರಿಯಾದ ಆರೋಪಿಯನ್ನು ಕೂಡಲೇ ಪೊಲೀಸರು ಬಂಧಿಸಿ ಆತನಿಗೆ ಕಠಿಣ ಶಿಕ್ಷೆ ಆಗುವಂತೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಚಿತ್ರ ನಟಿ ಅಕ್ಷತಾ ಪಾಂಡವಪುರ ಮತ್ತು ನಗರದ ಮಹಿಳೆಯರು ಆಗ್ರಹಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಪೊಲೀಸರು ಆರೋಪಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಜರುಗಿಸದ ಕಾರಣ ಮಹಿಳೆಯರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಆ್ಯಸಿಡ್ ದಾಳಿ ಹಾಗೂ ದೌರ್ಜನ್ಯ ಪ್ರಕರಣಗಳನ್ನು ಮಟ್ಟ ಹಾಕುವ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಆಗಬೇಕು. ಇಂತಹ ಕೃತ್ಯ ಎಸಗುವವರಿಗೆ ಕಾನೂನಿನಲ್ಲಿ ಯಾವುದೇ ಸಡಿಲಿಕೆ ನೀಡದೇ ನಿದರ್ಶನೀಯ ಶಿಕ್ಷೆ ನೀಡಬೇಕು ಎಂದು ಅಕ್ಷತಾ ಪಾಂಡವಪುರ ಒತ್ತಾಯಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

05/05/2022 08:54 pm

Cinque Terre

37.38 K

Cinque Terre

1

ಸಂಬಂಧಿತ ಸುದ್ದಿ