ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಶಂಭುಲಿಂಗ ಕಮಡೊಳ್ಳಿ(35) ಕೊಲೆಯಾದ ಯುವಕ. ಕಳೆದ ಒಂದು ವರ್ಷದ ಹಿಂದೆ ಅಷ್ಟೇ ಮದುವೆಯಾಗಿದ್ದ ಯುವಕನನ್ನು ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಇನ್ನೂ ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
14/05/2022 10:18 am