ಹುಬ್ಬಳ್ಳಿ: ಪೊಲೀಸ್ ಕ್ವಾಟರ್ಸ್ ನಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕಾರವಾರ ರಸ್ತೆಯಲ್ಲಿರುವ ಪೊಲೀಸ್ ಕ್ವಾಟರ್ಸ್ ದಲ್ಲಿ ನಡೆದಿದೆ.
ಹುಬ್ಬಳ್ಳಿಯ ಠಾಣೆಯೊಂದರಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಹೆಡ್ ಕಾನ್ ಸ್ಟೇಬಲ್ ಒಬ್ಬರ ಪುತ್ರಿಯೇ ಪೊಲೀಸ್ ಕ್ವಾಟರ್ಸ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಉಪನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಹುಬ್ಬಳ್ಳಿಯ ಕೀಮ್ಸ್ ಶವಾಗಾರಕ್ಕೆ ರವಾನಿಸಿ ಪ್ರಕರಣ ದಾಖಲು ಮಾಡಿಕೊಂಡು ಆತ್ಮಹತ್ಯೆಗೆ ಕಾರಣವಾದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
Kshetra Samachara
18/05/2022 12:09 pm