ಹುಬ್ಬಳ್ಳಿ: ಅದು ನಿಜಕ್ಕೂ ಛೋಟಾ ಮುಂಬಯಿ ಖ್ಯಾತಿಯ ನಗರ. ಆ ನಗರದಲ್ಲಿ ಪುಂಡರ ಹಾವಳಿ ಹೆಚ್ಚಾಗಿದೆ. ಹಾಡಹಗಲೇ ಫಿಲ್ಮ್ ಸ್ಟೈಲ್ ನಲ್ಲಿ ದರೋಡೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಆತಂಕ ಹುಟ್ಟು ಹಾಕಿದ್ದಾರೆ. ಅಷ್ಟಕ್ಕೂ ಯಾವುದು ಆ ನಗರ ? ಅಲ್ಲಿ ಆಗಿದ್ದಾದರೂ ಏನು ಅಂತೀರಾ ಈ ಸ್ಟೋರಿ ನೋಡಿ...
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪುಂಡರ ಹಾವಳಿ ಹೆಚ್ಚಾಗಿದ್ದು, ಜನರು ನಿಶ್ಚಿಂತೆಯಿಂದ ಜೀವನ ನಡೆಸುವುದೇ ಕಷ್ಟವಾಗಿದೆ. ಮೊನ್ನೆಯಷ್ಟೇ ಕಲ್ಲು ತೂರಾಟ ಪ್ರಕರಣ ಮಾಸುವ ಮುನ್ನವೇ ಕಳ್ಳರ ಹಾವಳಿ ಹೆಚ್ಚಾಗಿದ್ದು, ಹಳೆ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಪೋಸ್ಟ್ ಆಫೀಸ್ ಹಿಂದಿರುವ ರೇಣುಕಾದೇವಿ ಫೈನಾನ್ಸ್ ನಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ ನಡೆದಿದೆ.
ಮಂಜುನಾಥ ಸೊನ್ನದ ಎಂಬವರ ಫೈನಾನ್ಸ್ ಗೆ ನುಗ್ಗಿದ ದರೋಡೆಕೋರರು, ಡೋರ್ ಗಾಜು ಒಡೆದು 4,00,000 ರೂ. ದೋಚಿ ಪರಾರಿಯಾಗಿದ್ದಾರೆ. ಕೆಲಸಗಾರರು ಊಟಕ್ಕೆ ಹೋಗಿದ್ದ ಸಂದರ್ಭ ಈ ಘಟನೆ ನಡೆದಿದೆ. ಇನ್ನು, ಈ ಪ್ರಕರಣದಲ್ಲಿ ಇಂಟ್ರಸ್ಟಿಂಗ್ ವಿಷಯ ಅಂದರೆ ದರೋಡೆ ಮಾಡಿದವರು ಫೋನ್ ಮಾಡಿ ಆವಾಜ್ ಕೂಡ ಹಾಕಿದ್ದಾರೆ. ಪೊಲೀಸರು ಫೋನ್ ಸಂಭಾಷಣೆ ಆಧಾರವಾಗಿಟ್ಟು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಹುಬ್ಬಳ್ಳಿಯಲ್ಲಿ ದರೋಡೆ, ಕಳ್ಳತನ ಪ್ರಕರಣಗಳು ಈಗ ಹಾಡಹಗಲೇ ನಡೆಯುತ್ತಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೆ ದೂಡಿವೆ. ಜನರೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ.
ಒಟ್ಟಿನಲ್ಲಿ ಅವಳಿನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ನಿಲುವು ತಳೆಯುವ ಮೂಲಕ ಜನರ ಆತಂಕವನ್ನು ದೂರ ಮಾಡಿ, ಇಂತಹ ಪ್ರಕರಣಗಳಿಗೆ ಬ್ರೇಕ್ ಹಾಕಬೇಕಿದೆ.
Kshetra Samachara
18/05/2022 03:40 pm