ಹುಬ್ಬಳ್ಳಿ: ಮನೆಯಲ್ಲಿ ಯಾರು ಇಲ್ಲದನ್ನು ಗಮನಿಸಿದ ಕಳ್ಳರು, ಕೀಲಿ ಮುರಿದು ಬರೊಬ್ಬರಿ 2.40 ಲಕ್ಷ ರೂ ಮೌಲ್ಯದ ಚಿನ್ನ ಮತ್ತು ಬೆಳ್ಳಿ ಸಾಮಗ್ರಿ ಹಾಗೂ 35 ಸಾವಿರ ನಗದು ಕಳವು ಮಾಡಿಕೊಂಡು ಪರಾರಿಯಾದ ಘಟನೆ ನಗರದ ಹೆಗ್ಗರಿ ಮಾರುತಿ ನಗರದಲ್ಲಿ ನಡೆದಿದೆ.
ಹೊಟೇಲ್ ಕೆಲಸಗಾರ ಗೂಡುಚಂದ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಅಂದಾಜು 2,75,500 ರೂ, ಮೌಲ್ಯದ 42 ಗ್ರಾಂ ಚಿನ್ನಾಭರಣ , 565 ಗ್ರಾಂ ಬೆಳ್ಳಿ ಸಾಮಗ್ರಿ ಹಾಗೂ ನಗದು ಕಳವು ಮಾಡಿದ್ದಾರೆ ಹಳೇಹುಬ್ಬಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
30/05/2022 03:41 pm