ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಮತ್ತೆ ಮೊಳಗಿದೆ. 100ಕ್ಕೂ ಹೆಚ್ಚು ರೌಡಿಗಳು ಒಂದಡೇ ಸೇರಿ ಭರ್ಜರಿಯಾಗಿ ಬರ್ತ್ ಡೇ ಪಾರ್ಟಿ ಮಾಡುತ್ತಿದ್ದ ವೇಳೆಯಲ್ಲಿ ವೇದಿಕೆಯ ಮೇಲೆ ಆರು ಸುತ್ತು ಗುಂಡು ಹಾರಿಸಿದ ಘಟನೆ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಫಾರ್ಮ್ ಹೌಸ್‌ನಲ್ಲಿ ನಡೆದಿದೆ.
ಹೌದು. ಆರ್‌ಟಿಐ ಕಾರ್ಯಕರ್ತ, ಕೇಶ್ವಾಪುರದ ಫಿಲೋಮಿನಾ ಪೌಲ್ ಪುತ್ರ ಸುಂದರ ಪೌಲ್‌ನ ಬರ್ತ್ ಡೇ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕುಸಗಲ್ ರಸ್ತೆಯ ಕಲಬುರಗಿ ಫಾರ್ಮ್ ಹೌಸ್‌ನಲ್ಲಿ ರಾತ್ರಿ ಪಾರ್ಟಿ ಆಯೋಜಿಸಲಾಗಿತ್ತು. ಈ ವೇಳೆ ಗುಂಡು ಹಾರಿಸಲಾಗಿದ್ದು, ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇನ್‌ಸ್ಪೆಕ್ಟರ್ ರಮೇಶ್ ಗೋಕಾಕ್ ನೇತೃತ್ವದ ತಂಡ ಫಾರ್ಮ್ ಹೌಸ್ ತಲಾಷ್ ಮಾಡಿದೆ. ಹೊಸೂರು, ಸೆಟಲ್ಮೆಂಟ್ ಸೇರಿದಂತೆ ನಗರದ ವಿವಿಧ ಪ್ರದೇಶದ ರೌಡಿಗಳು ಒಂದಡೇ ಸೇರಿಸಿದ್ದು, ಫಿಲೋಮಿನ್ ಬಳಿ ಇದ್ದ ಲೈಸನ್ಸ್ ಪಿಸ್ತೂಲ್ ವಶಕ್ಕೆ ಪಡೆದಿದ್ದಾರೆ.
ಹುಬ್ಬಳ್ಳಿಯಲ್ಲಿ ರೌಡಿ ಉಪಟಗಳಕ್ಕೆ ಜನರು ಬೆಚ್ಚಿಬಿದ್ದಿದ್ದಾರೆ. ಸುಂದರ ಪೌಲ್ ಉಪಟಳ ಇದೇ ಮೊದಲೇನಲ್ಲ. ಈ ಹಿಂದೆ ಕಾಲೇಜ್ ಕ್ಯಾಂಪಸ್‌ನಲ್ಲಿ ಸುಂದರ ಪೌಲ್ ಪಿಸ್ತೂಲ್ ತೋರಿಸಿ ಸುದ್ದಿಯಾಗಿದ್ದ.
Kshetra Samachara
06/06/2022 12:04 pm