ಧಾರವಾಡ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 20 ಕ್ಕೂ ಹೆಚ್ಚು ಗೋವುಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಬೈಪಾಸ್ ರಸ್ತೆ ಮೂಲಕ ಗೋವುಗಳನ್ನು ಕಿತ್ತೂರಿಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿಯಾಧರಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ನರೇಂದ್ರ ಟೋಲನಾಕಾ ಬಳಿ ಲಾರಿ ಮೇಲೆ ದಾಳಿ ನಡೆಸಿ, ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ಅಲ್ಲದೆ, 20ಕ್ಕೂ ಹೆಚ್ಚು ಗೋವುಗಳನ್ನು ರಕ್ಷಿಸಿ, ಅವುಗಳಿಗೆ ಬಿಡುಗಡೆ ಭಾಗ್ಯ ನೀಡಿದ್ದಾರೆ.
Kshetra Samachara
13/06/2022 11:03 pm