ಹುಬ್ಬಳ್ಳಿ: ನಿನ್ನೆ ಮಂಗಳವಾರ ಬೆಳಗ್ಗೆ ಅಪರಿಚಿತನೊಬ್ಬ ಉಣಕಲ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ. ಸ್ಥಳೀಯರು ಈ ವಿಷಯವನ್ನು ಪೊಲೀಸರಿಗೆ ತಿಳಿಸಿದಾಗ ಘಟನಾ ಸ್ಥಳಕ್ಕೆ ಬಂದ ಪೊಲೀಸರು, ಸಂಜೆವರೆಗೆ ಮೃತದೇಹ ಹುಡುಕುವ ಕಾರ್ಯಾಚರಣೆ ನಡೆಸಿದ್ದರು. ಆದ್ರೆ ಮೃತದೇಹ ಸಿಕ್ಕಿರಲಿಲ್ಲ.
ಇಂದು ಬೆಳಗ್ಗೆ ಕಾರ್ಯಾಚರಣೆ ಮಾಡುತ್ತಿರುವಾಗ ವ್ಯಕ್ತಿಯ ಶವ ಪತ್ತೆಯಾಗಿದೆ. ಆತನಲ್ಲಿ ಯಾವುದೇ ಗುರುತು ಇಲ್ಲದ ಕಾರಣ ವ್ಯಕ್ತಿ ಯಾರು ಎಂಬುದು ತಿಳಿದು ಬಂದಿಲ್ಲ. ಪರಿಶೀಲನೆಗೆಂದು ಶವವನ್ನು ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
Kshetra Samachara
15/06/2022 10:40 am