ಹುಬ್ಬಳ್ಳಿ: ನೈಋತ್ಯ ರೈಲ್ವೆಯ ವಲಯದ ಹುಬ್ಬಳ್ಳಿಯ ನಿಲ್ದಾಣದ ಆವರಣದಲ್ಲಿ ಅವೈಜ್ಞಾನಿಕ ಹಾಗೂ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಕಾಮಗಾರಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಗೋಡೆ ನಿರ್ಮಾಣದ ಕಾಮಗಾರಿಯೊಂದು ಎರಡು ಜೀವಗಳನ್ನು ಬಲಿಪಡೆದಿದೆ.
ಹೌದು ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಕಾಯ್ದಿರಿಸುವ ಟಿಕೆಟ್ ಕೌಂಟರ್ ಮುಂದುಗಡೆ ಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಗೋಡೆಯ ಪಕ್ಕದಲ್ಲಿ ದೊಡ್ಡದಾದ ಗುಂಡಿಯನ್ನು ತೆಗೆದಿದ್ದು, ಈ ಹಿನ್ನೆಲೆಯಲ್ಲಿ ಅಕಳು ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದೆ. ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸದೇ ಇರುವ ಹಿನ್ನೆಲೆಯಲ್ಲಿ ಇಂತಹ ಅವಘಡ ಸಂಭವಿಸಿದ್ದು, ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಇಂಜಿನಿಯರ್ ಬೇಜವಾಬ್ದಾರಿತನದಿಂದ ಘಟನೆ ನಡೆದಿದೆ ಎಂದು ಸಾರ್ವಜನಿಕರು ಪಬ್ಲಿಕ್ ನೆಕ್ಸ್ಟ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಇನ್ನೂ ಎರಡು ದಿನಗಳ ಹಿಂದೆಯಷ್ಟೆ ಬಿದ್ದಿದ್ದು, ದುರ್ವಾಸನೆಯಿಂದ ಜನರು ನರಕಯಾತನೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ನೈಋತ್ಯ ರೈಲ್ವೆ ವಲಯ ಸೂಕ್ತ ಕ್ರಮಗಳನ್ನು ಜರುಗಿಸಿ ಮುಂದಿನ ದಿನಗಳಲ್ಲಿ ಆಗಬಹುದಾದ ಅಪಘಾತಗಳನ್ನು ತಪ್ಪಿಸುವ ಕಾರ್ಯವನ್ನು ಮಾಡಬೇಕಿದೆ.
Kshetra Samachara
24/06/2022 12:54 pm