ಕುಂದಗೋಳ: ತಾಲೂಕಿನ ಹೊಸಳ್ಳಿ ಗ್ರಾಮದಲ್ಲಿ ಮನೆಯೊಂದಕ್ಕೆ ನುಗ್ಗಿದ ಕಳ್ಳರು 32 ಗ್ರಾಂ ಚಿನ್ನ ಕದ್ದು ಪರಾರಿಯಾದ ಘಟನೆ ಜೂ.20 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಹೌದು ! ಹೊಸಳ್ಳಿ ಗ್ರಾಮದ ನಾಗಪ್ಪ ಫಕ್ಕಿರಪ್ಪ ಮ್ಯಾಗೇರಿ ಎಂಬುವವರ ಮನೆಗೆ ನುಗ್ಗಿದ ಕಳ್ಳರು ಟ್ರಜೂರಿ ಬೀಗ ತೆರೆದು 32 ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ.
ಕುಟುಂಬಸ್ಥರು ಟ್ರೂಜೂರಿ ಬೀಗ ತೆಗೆದಿರುವುದನನ್ನು ನೋಡಿದಾಗಲೇ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದ್ದು ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ಕಾರ್ಯ ಕೈಗೊಂಡು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.
Kshetra Samachara
24/06/2022 02:57 pm