ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಚಾಕು ಇರಿದು ವ್ಯಕ್ತಿಯ ಕೊಲೆ ಪ್ರಕರಣ: ತನಿಖೆ ಪ್ರಗತಿಯಲ್ಲಿದೆ: ಹು-ಧಾ ಪೊಲೀಸ್ ಆಯುಕ್ತ

ಹುಬ್ಬಳ್ಳಿ: ವೈಯಕ್ತಿಕ ಕಾರಣದ ಹಿನ್ನೆಲೆಯಲ್ಲಿ ನಿನ್ನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಲಾಟೆ ನಡೆದಿದ್ದು, ತೀವ್ರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಹು-ಧಾ ಪೊಲೀಸ್ ಆಯುಕ್ತರಾದ ಲಾಭುರಾಮ್ ಹೇಳಿದರು.

ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಕಾರನಗರದಲ್ಲಿ ಚಂದ್ರಶೇಖರ ಎಂಬುವವರ ಮೇಲೆ ಇಬ್ಬರು ಹಲ್ಲೆ ಮಾಡಿದ್ದರು. ಗಾಯಾಳುವನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಚಂದ್ರಶೇಖರ ಸಾವನ್ನಪ್ಪಿದ್ದಾನೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರೂ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದರು.

ವೈಯಕ್ತಿಕ ಕಾರಣಕ್ಕೆ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುತ್ತಿದೆ. ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Edited By : Somashekar
Kshetra Samachara

Kshetra Samachara

24/06/2022 03:44 pm

Cinque Terre

47.48 K

Cinque Terre

1

ಸಂಬಂಧಿತ ಸುದ್ದಿ