ಹುಬ್ಬಳ್ಳಿ: ಪತಿ ನನ್ನ ಮೇಲೆ ದೌರ್ಜನ್ಯ ಎಸಗಿದಲ್ಲದೇ ಕುತ್ತಿಗೆ ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ಪಾಲಿಕೆ ಸದಸ್ಯೆ ಶೃತಿ ಚಲವಾದಿ ತನ್ನ ಪತಿ ಸಂತೋಷ ವಿರುದ್ಧ ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರರಕಣ ದಾಖಲಿಸಿದ್ದಾರೆ.
ಪತಿ ಸಂತೋಷ ಪರಸ್ತ್ರೀಯೊಂದಿಗೆ ಮೊಬೈಲ್‌ನಲ್ಲಿ ಮಾತನಾಡುವುದು ಮತ್ತು ಮೇಸೆಜ್ ಮಾಡುವ ವಿಷಯಕ್ಕೆ ಹಲವಾರು ಬಾರಿ ಇಬ್ಬರ ಮಧ್ಯೆ ವಾಗ್ವಾದವಾಗಿದೆ. ಈ ಜಗಳ ಭಾನುವಾರ ಅತೀರೇಖಕ್ಕೆ ತಲುಪಿದ್ದು, ಪತ್ನಿ ಶೃತಿ ಗರ್ಭಿಣಿಯೆಂದು ಲೆಕ್ಕಿಸದೆ ಹಲ್ಲೆ ನಡಸಿದ್ದಾನೆ. ಈಗಾಗಲೇ ಪರಸ್ತ್ರಿಯೊಂದಿಗೆ ಸಂಬಂಧವಿದ್ದು, ನಾನು ಅವಳನ್ನು ಮದುವೆಯಾಗಿ ನಿನಗೆ ವಿಚ್ಛೇಧನ ನೀಡುತ್ತೇನೆ ಮನೆ ಬಿಟ್ಟು ಹೋಗು ಎಂದು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎಂದು ಪಾಲಿಕೆ ಸದಸ್ಯೆ ದೂರಿನಲ್ಲಿ ತಿಳಿಸಿದ್ದಾರೆ.
ಅಷ್ಟೇ ಅಲ್ಲದೆ ನಿನ್ನನ್ನು ಮತ್ತು ನಿಮ್ಮ ಅಣ್ಣನನ್ನು ಹುಡುಗರ ಕರೆಸಿ ಕೊಲೆ ಮಾಡಿಸುತ್ತೇನೆ ಎಂದು ಪತ್ನಿಯ ಕುತ್ತಿಗೆ ಹಿಚುಕಿ ಕೊಲೆ ಮಾಡಲು ಯತ್ನಿಸಿದ ಎಂದು ದೂರಿನಲ್ಲಿ ಉಲ್ಲೇಖಿಸಿದ್ದು, ಈ ಕುರಿತು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
28/06/2022 01:13 pm