ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮದ್ಯ ಸೇವಿಸಿ ಬಾರ್‌ನಲ್ಲಿ ಗಲಾಟೆ: ಒಡೆದ ಬಾಟಲಿಯಿಂದ ಸಿಬ್ಬಂದಿ ಮೇಲೆ ಹಲ್ಲೆ

ಹುಬ್ಬಳ್ಳಿ: ವಾಣಿಜ್ಯನಗರಿಯಲ್ಲಿ ಒಂದಿಲ್ಲೊಂದು ಕಾರಣಕ್ಕೆ ಗಲಾಟೆ ಹಾಗೂ ಕ್ರೈಂ ಪ್ರಕರಣ ನಡೆಯುತ್ತಿದ್ದು, ಕುಡಿದ ಮತ್ತಿನಲ್ಲಿ ಗಲಾಟೆ ಮಾಡಿ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆಯೊಂದು ಹುಬ್ಬಳ್ಳಿಯಲ್ಲಿ ನಡೆದಿದೆ.

ಬಾರ್‌ನಲ್ಲಿ ಮದ್ಯ ಸೇವನೆ ಮಾಡುತ್ತಿದ್ದವರ ನಡುವೆ ಗಲಾಟೆ ಬಿಡಿಸಲು ಮುಂದಾದ ಸಿಬ್ಬಂದಿಗೆ ಮೂವರು ಸೇರಿ ಒಡೆದ ಬಾಟಲಿಯಿಂದ ಹಲ್ಲೆ ನಡೆಸಿ ಹತ್ಯೆಗೆ ಮುಂದಾದ ಪ್ರಕರಣ ಇಲ್ಲಿನ ಶಿರೂರ ಪಾರ್ಕ್‌ನ ಬಾರ್ ಒಂದರಲ್ಲಿ ನಡೆದಿದೆ.

ಹೊಸೂರಿನ ಸುಪ್ರಿತ್, ಆದಿತ್ಯ, ಪ್ರಜ್ವಲ್ ಸೇರಿ ನಾಲ್ವರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು, ಸ್ನೇಹಿತರ ಜೊತೆ ಮದ್ಯ ಸೇವನೆ ಮಾಡುತ್ತಿದ್ದಾಗ ಪಕ್ಕದ ಟೇಬಲ್‌ನಲ್ಲಿ ಕುಳಿತವರ ಜೊತೆ ಜಗಳ ಮಾಡಿ, ಬಾಟಲಿ ಒಡೆದು ಹಲ್ಲೆಗೆ ಯತ್ನಿಸಿದ್ದರು. ಬಾರ್ ವ್ಯವಸ್ಥಾಪಕ ಮಂದಾ‌ರ್ ಮತ್ತು ಸಿಬ್ಬಂದಿ ಮಿಥುನ್ ಅದನ್ನು ತಡೆದಾಗ, ಅಶ್ಲೀಲವಾಗಿ ಬೈದು ಅವರ ಮೇಲೆಯೇ ಹಲ್ಲೆಗೆ ಮುಂದಾಗಿದ್ದರು. ಅದನ್ನು ತಪ್ಪಿಸಲು ಸಿಬ್ಬಂದಿ ರವಿ, ಮಂಜುನಾಥ ಮತ್ತು ಸಂತೋಷ ಹೋದಾಗ, ಆರೋಪಿಗಳು ಸಂತೋಷ ಅವರ ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ. ಪ್ರಿಂಟರ್ ಹಾಗೂ ಗಾಜಿನ ಕದ ಒಡೆದು ಹಾನಿ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Edited By : Manjunath H D
Kshetra Samachara

Kshetra Samachara

28/06/2022 05:32 pm

Cinque Terre

69.99 K

Cinque Terre

1

ಸಂಬಂಧಿತ ಸುದ್ದಿ