ನವಲಗುಂದ : ರೈತನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನವಲಗುಂದ ತಾಲ್ಲೂಕಿನ ಮೊರಬ ಗ್ರಾಮದಲ್ಲಿ ಮಂಗಳವಾರ ನಡೆದಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ರೈತ ಮೃತ ಪಟ್ಟ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮೊರಬ ಗ್ರಾಮದ 35 ವರ್ಷ ವಯಸ್ಸಿನ ಮಹಾಂತೇಶ ಮಲ್ಲಪ್ಪ ಮುದೆಣ್ಣವರ ಎಂದು ತಿಳಿದು ಬಂದಿದ್ದು, ಎರಡು ಎಕರೆ ಜಮೀನು ಹೊಂದಿದ್ದ ಈತ ಕೃಷಿ ಚಟುವಟಿಕೆಗಾಗಿ ಖಾಸಗಿ ಬ್ಯಾಂಕ್ ನಲ್ಲಿ ಸಾಲ ತೆಗೆದುಕೊಂಡಿದ್ದ ಕಾರಣ ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ವಿಷ ಸೇವಿಸಿ ಅಸ್ವಸ್ಥಗೊಂಡ ಮಹಾಂತೇಶನನ್ನು ಮೊರಬದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಿಮ್ಸ್‌ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ ಹಿನ್ನೆಲೆ ಗ್ರಾಮಸ್ಥರು ಆತನ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಮತ್ತು ಸಾಲವನ್ನು ವಜಾ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
Kshetra Samachara
29/06/2022 01:56 pm