ಕಲಘಟಗಿ:ಮಹಿಳೆಯೊಬ್ಬಳನ್ನು ಕೊಲೆ ಮಾಡಿದ ದುಷ್ಕರ್ಮಿಗಳು ಮೃತ ದೇಹಕ್ಕೆ ಬೆಂಕಿ ಹಚ್ಚಿರುವ ಘಟನೆಯೊಂದು ಕಲಘಟಗಿ ತಾಲೂಕಿನ ತಂಬೂರ ಎಂಬ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಹುಬ್ಬಳ್ಳಿಯ ಭೈರಿದೇವರಕೊಪ್ಪ ಗ್ರಾಮದ ನಿವಾಸಿ ಮಹಾದೇವಿ ನೀಲನ್ನವರ ಎನ್ನುವ ಮಹಿಳೆಯನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಮಾಹಿತಿ ಲಭ್ಯವಾಗಿದ್ದು, ಹೆಚ್ಚಿನ ಮಾಹಿತಿ ಪೊಲೀಸ್ ತನಿಖೆಯ ನಂತರವೇ ಹೊರಬರಬೇಕಿದೆ.
ಇನ್ನೂ ಕೊಲೆ ಮಾಡಿ ದೇಹವನ್ನು ಸುಟ್ಟಿದ್ದಾರೋ ಅಥವಾ ಸುಟ್ಟು ಕೊಲೆ ಮಾಡಿದ್ದಾರೋ ಎಂಬುವ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
03/07/2022 07:46 pm